ವಿದ್ಯಾರ್ಥಿನಿ ಜೊತೆಗಿನ ಅಶ್ಲೀಲ ಫೋಟೋಗಳನ್ನು ಸ್ಟೇಟಸ್‍ಗೆ ಹಾಕಿದ ಶಿಕ್ಷಕನಿಗೆ ಧರ್ಮದೇಟು!

62
firstsuddi

ಬೆಳಗಾವಿ : ವಿದ್ಯಾರ್ಥಿನಿ ಜೊತೆಗೆ ಶಿಕ್ಷಕನ ಲವ್ವಿಡವ್ವಿಯ ಅಶ್ಲೀಲ ಫೋಟೋ ವೈರಲ್ ಆಗಿದ್ದು, ಶಿಕ್ಷಕನಿಗೆ ಗ್ರಾಮಸ್ಥರು ಧರ್ಮದೇಟು ನೀಡಿದ್ದಾರೆ. ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿರುವ 44 ವರ್ಷದ ಮಹೇಶ ಶಿವಲಿಂಗಪ್ಪ ಬಿರಾದಾರನಿಗೆ ಗ್ರಾಮಸ್ಥರು, ಕುಟುಂಬಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಲ್ಲದೇ ಶಿಕ್ಷಕನ ವಿರುದ್ಧ ದೂರು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮೂಲತಃ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬೈರವಾಡ ಗ್ರಾಮದ ಶಿವಲಿಂಗಪ್ಪ ಬಿರಾದಾರ ವಿದ್ಯಾರ್ಥಿನಿ ಶಾಲೆಗೆ ಬರುತ್ತಿದ್ದ ವೇಳೆ ಮದುವೆಯಾಗುವುದಾಗಿ ನಂಬಿಸಿ, ಆಕೆಯನ್ನು ಶಿಕ್ಷಕ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಜೊತೆಗೆ ವಿದ್ಯಾರ್ಥಿನಿ ಜೊತೆಗಿನ ಅಶ್ಲೀಲ ಫೋಟೋಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿದುಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ವಿದ್ಯಾರ್ಥಿನಿಗೆ ಸದ್ಯ ಬೇರೆ ಯುವಕನೊಂದಿಗೆ ಮದುವೆ ನಿಗದಿಯಾಗಿತ್ತು. ಆದ್ದರಿಂದ ಯುವತಿಯ ಮದುವೆ ನಿಲ್ಲಿಸಲು ತಮ್ಮ ಬಳಿ ಇದ್ದ ಖಾಸಗಿ ಫೋಟೋಗಳನ್ನು ಶಿಕ್ಷಕ ಸ್ಟೇಟಸ್‍ನಲ್ಲಿ ಹಾಕಿಕೊಂಡಿದ್ದನು. ಆ ಬಳಿಕ ಫೋಟೋಗಳು ವೈರಲ್ ಆಗಿದ್ದವು. ಇದನ್ನು ಗಮನಿಸಿದ ಗ್ರಾಮಸ್ಥರು ಮತ್ತು ಪೋಷಕರು ಶಾಲೆಗೆ ಆಗಮಿಸಿ ಶಿಕ್ಷಕನಿಗೆ ಹೊಡೆದಿದ್ದಾರೆ. ಸದ್ಯ ಶಿಕ್ಷಕನ ವಿರುದ್ಧ ಫೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.