ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಗೆ ಯಾವುದೇ ದೇಶ ಇಂಧನ ಹಾಗೂ ಕಲ್ಲಿದ್ದಲು ಕೊಳ್ಳಲು ಹಣ ನೀಡುತ್ತಿಲ್ಲ. ಆದರೆ ಭಾರತ ನೀಡುತ್ತಿದೆ ಎಂದು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ತಿಳಿಸಿದ್ದಾರೆ. ಹಾಗೇ ಶ್ರೀಲಂಕಾಗೆ ತನ್ನ ಸಹಾಯವನ್ನು ತ್ವರಿತಗೊಳಿಸಲು ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಮ್ ಎಫ್)ಗೆ ಒತ್ತಾಯಿಸಿದ್ದಾರೆ.
ತೀವ್ರ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತ ಶ್ರೀಲಂಕಾಗೆ ಸಾವಿರಾರು ಟನ್ ಗಳಷ್ಟು ಡೀಸೆಲ್ ಹಾಗೂ ಪೆಟ್ರೋಲ್ ಅನ್ನು ನೀಡಿ, ಇಂಧನ ಕೊರತೆಯನ್ನು ನಿವಾರಿಸಲು ಸಹಾಯ ಮಾಡಿದೆ. ಭಾರತದಿಂದ ಇನ್ನೂ ಹೆಚ್ಚಿನ ಸಹಾಯವನ್ನು ಕೇಳಲು ನಮ್ಮಿಂದ ಸಾಧ್ಯವಿಲ್ಲ ಎಂದಿದ್ದಾರೆ.
ಶ್ರೀಲಂಕಾ 1948ರಲ್ಲಿ ದ್ವೀಪರಾಷ್ಟ್ರ ಬ್ರಿಟನ್ ನಿಂದ ಸ್ವಾತಂತ್ರ್ಯ ಪಡೆದ ಬಳಿಕ ಇದೇ ಮೊದಲ ಬಾರಿಗೆ ಅತ್ಯಂತ ಕೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಎದುರಿಸುತ್ತಿದೆ.