ಬೆಳಗಾವಿ : ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲೇ ಗಲ್ಲಿಗೇರಿಸಿದ ಘಟನೆ ನಗರದಲ್ಲಿ ನಡೆದಿದೆ.
ನಗರದ ಫೋರ್ಟ್ ರಸ್ತೆಯಲ್ಲಿ ಕಿಡಿಗೇಡಿಗಳು ನೂಪುರ್ ಶರ್ಮಾ ಅವರ ಭಾವಚಿತ್ರದ ಸಮೇತ ಅವರ ಪ್ರತಿಕೃತಿಯನ್ನು ಹಗ್ಗ ಕಟ್ಟಿ ನಿನ್ನೆ ತಡರಾತ್ರಿ ನೇತುಹಾಕಿದ್ದರು. ಇಂದು ಬೆಳಗ್ಗೆ ಇದನ್ನು ಕಂಡು ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಹೆಚ್ಚು ಜನ ಜಮಾಯಿಸಿದ್ದರಿಂದ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ವಿಷಯ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಮಾರ್ಕೇಟ್ ಠಾಣೆ ಪೊಲಿಸರು ಭೇಟಿ ನೀಡಿ ಪ್ರತಿಕೃತಿಯನ್ನು ತೆರವುಗೊಳಿಸಿದ್ದು, ಸುತ್ತಲಿನ ಪ್ರದೇಶದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.










