ಡ್ರಗ್ಸ್ ಪ್ರಕರಣ : ಬಾಲಿವುಡ್‍ನ ಖ್ಯಾತ ನಟಿಯ ಸಹೋದರ ಪೊಲೀಸರ ವಶಕ್ಕೆ…

64
firstsuddi

ಬೆಂಗಳೂರು : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ನಟಿಯ ಸಹೋದರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಲಸೂರು ಠಾಣಾ ವ್ಯಾಪ್ತಿಯ ಜಿ.ಟಿ ಮಾಲ್ ಮುಂಭಾಗದಲ್ಲಿರುವ ದಿ ಪಾರ್ಕ್ ಹೋಟೆಲ್ ನಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಅನುಮಾನ ಹಿನ್ನೆಲೆ ರಾತ್ರಿ 12 ಗಂಟೆಯ ಸುಮಾರಿಗೆ ಹಲಸೂರು ಇನ್ಸ್ ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿ ಪಾರ್ಟಿಯಲ್ಲಿ ತೊಡಗಿದ್ದ ಯುವಕ ಯುವತಿ ಸೇರಿ ಒಟ್ಟು 50ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆದಿದ್ದರು. ಈ ಗುಂಪಿನಲ್ಲಿದ್ದ 35 ಜನರಿಗೆ ಮೆಡಿಕಲ್ ಟೆಸ್ಟ್ ಮಾಡಿಸಿದ್ದು, ಐವರು ಮಾದಕವಸ್ತು ಸೇವನೆ ಮಾಡಿರೋದು ದೃಢವಾಗಿದೆ.

ಈ ಪಾರ್ಟಿಯಲ್ಲಿ ಬಾಲಿವುಡ್ ನ ಹಿರಿಯ ನಟ ಶಕ್ತಿ ಕಪೂರ್ ಪುತ್ರ ಹಾಗೂ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಕೂಡ ಸಿಕ್ಕಿ ಬಿದ್ದಿದ್ದು, ಡ್ರಗ್ಸ್ ತೆಗೆದುಕೊಂಡಿರುವುದು ಸಾಬೀತಾಗಿದೆ. ಪರಿಣಾಮ ಸಿದ್ಧಾಂತ್ ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.