ಇಂದು ಇಡಿ ವಿಚಾರಣೆಗೆ ಹಾಜರಾಗಲಿರುವ ರಾಹುಲ್ ಗಾಂಧಿ.

53
firstsuddi

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ಮುಂದೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಲಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯ ಆರೋಪಗಳು ಕೇಳಿ ಬಂದ ಹಿನ್ನೆಲೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿಗೆ ಈ ಹಿಂದೆ ಸಮನ್ಸ್ ನೀಡಲಾಗಿತ್ತು.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಹುಲ್ ಗಾಂಧಿ ಮತ್ತು ಜೂ.23 ರಂದು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ವಿಚಾರಣೆಗೆ ಸಮನ್ಸ್ ಪಡೆದಿರುವ ಸೋನಿಯಾ ಗಾಂಧಿ ಅವರು ಜೂ.23 ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ. ಈ ನಡುವೆ ಜಾರಿ ನಿರ್ದೇಶನಾಲಯವು ರಾಹುಲ್ ಹಾಗೂ ಸೋನಿಯಾಗಾಂಧಿ ಅವರಿಗೆ ನಿರಂತರ ನೋಟಿಸ್ ಗಳನ್ನು ನೀಡುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶದ ಇಡಿ ಕಚೇರಿಗಳ ಮುಂದೆ ಪ್ರತಿಭಟನೆ ಮತ್ತು ಮೆರವಣಿಗೆಗಳನ್ನು ನಡೆಸಲು ತಯಾರಿ ನಡೆಸುತ್ತಿದೆ.

ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು ಸೇರಿದಂತೆ ಕೆಲವು ಕಾರಣಗಳನ್ನು ಉಲ್ಲೇಖಿಸಿ ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ಕಚೇರಿವರೆಗೆ ನಡೆಸಲು ಉದ್ದೇಶಿಸಿರುವ ಕಾಂಗ್ರೆಸ್ ರ‍್ಯಾಲಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.