ಇಡಿ ವಿಚಾರಣೆಗೆ ಹಾಜರಾದ ರಾಹುಲ್ – ಸಾಥ್ ಕೊಟ್ಟ ಪ್ರಿಯಾಂಕಾ ಗಾಂಧಿ.

66
firstsuddi

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಡಿ ಮುಂದೆ ಹಾಜರಾಗಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಸಾಥ್ ಕೊಟ್ಟಿದ್ದಾರೆ. ಪಕ್ಷದ ಕಾರ್ಯಕರ್ತರು ಅವರನ್ನು ಬೆಂಬಲಿಸಿ ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೂ ಪಾದಯಾತ್ರೆ ಮಾಡಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧದ ಕ್ರಮ ಖಂಡಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಮತ್ತೊಂದು ಕಡೆ ನವದೆಹಲಿಯಲ್ಲಿರುವ ಇಡಿ ಕಚೇರಿವರೆಗೆ ನಡೆಸಲು ಉದ್ದೇಶಿಸಿದ್ದ ರ‍್ಯಾಲಿಗೆ ದೆಹಲಿ ಪೊಲೀಸರು ಅನುಮತಿ ನೀಡಿಲ್ಲ. ಈ ಸಂಬಂಧ, ಇಡಿ ಕಚೇರಿಗೆ ತೆರಳಲು ಉದ್ದೇಶಿತ ಮೆರವಣಿಗೆಗಾಗಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.