ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸತ್ಯೇಂದ್ರ ಜೈನ್ ಅವರ ಕಸ್ಟಡಿ ಅವಧಿ ಇಂದಿಗೆ ಕೊನೆಯಾದ ಹಿನ್ನಲೆಯಲ್ಲಿ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇಲ್ಲಿನ ರೋಸ್ ಅವೆನ್ಯೂ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಅಕ್ರಮ ಹಣ ವರ್ಗಾವಣೆ (ಪಿಎಂಎಲ್‍ಎ) ಆರೋಪದ ಅಡಿಯಲ್ಲಿ ಮೇ 30 ರಂದು ಸತೇಂದ್ರ ಜೈನ್ ಅವರನ್ನು ಇಡಿ ಬಂಧಿಸಿತ್ತು.










