ದೇಶದಲ್ಲಿ 6,594 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,32,36,695ಕ್ಕೆ ಏರಿಕೆ…

65
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,594 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,32,36,695ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,24,777ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,32,36,695 ಮಂದಿ ಸೋಂಕಿತರ ಪೈಕಿ ಈವರೆಗೆ 4,26,61,370 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.