ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ ; ರೈಲಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು!

55
firstsuddi

ಕೇಂದ್ರ ಸರ್ಕಾರದ ಹೊಸ ಸೇನಾ ನೇಮಕಾತಿ ಯೋಜನೆ ಅಗ್ನಿಪಥ್ ವಿರೋಧಿಸಿ ಉತ್ತರಪ್ರದೇಶದ ಮತ್ತು ಬಿಹಾರದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಉದ್ರಿಕ್ತ ಪ್ರತಿಭಟನಾಕಾರರ ಗುಂಪುಗಳು ರೈಲುಬೋಗಿಗಳಿಗೆ ಬೆಂಕಿ ಇಡುತ್ತಿವೆ. ಉತ್ತರಪ್ರದೇಶದಲ್ಲಿ ಇಂದು ಬೆಳಗ್ಗೆ ಬಲ್ಲಿಯಾದಲ್ಲಿ ರೈಲ್ವೇ ನಿಲ್ದಾಣಕ್ಕೆ ನುಗ್ಗಿದ ಗುಂಪೊಂದು ರೈಲಿಗೆ ಬೆಂಕಿ ಹಚ್ಚಿದೆ. ಪೊಲೀಸರು ಅವರನ್ನು ಚದುರಿಸಲು ಬಲಪ್ರಯೋಗ ಮಾಡುವ ಮೊದಲು ರೈಲ್ವೇ ನಿಲ್ದಾಣದ ಆಸ್ತಿಯನ್ನು ಉದ್ರಿಕ್ತ ಪ್ರತಿಭಟನಾಕಾರರ ಗುಂಪು ಹಾನಿಗೊಳಿಸಿದೆ. ಬಿಹಾರದ ಮೊಹಿಯುದ್ದಿನಗರ ನಿಲ್ದಾಣದಲ್ಲಿ ಜಮ್ಮು ತಾವಿ ಎಕ್ಸ್ ಪ್ರೆಸ್ ರೈಲಿನ ಎರಡು ಕೋಚ್ ಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೃಷ್ಟವಷಾತ್ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಹಲವಾರು ರಾಜ್ಯಗಳಲ್ಲಿ ಪ್ರತಿಭಟನೆಗಳ ನಂತರ ಸರ್ಕಾರವು 2022ರ ಯೋಜನೆಯಡಿಯಲ್ಲಿ ನೇಮಕಾತಿಗಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು 21 ವರ್ಷದಿಂದ 23 ವರ್ಷಕ್ಕೆ ಏರಿಸಿದೆ.