ಗಾಂಧೀನಗರ : ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಇಂದು 100 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ತಾಯಿಯ ಹುಟ್ಟುಹಬ್ಬದಂದು ಆಶೀರ್ವಾದ ಪಡೆಯುವ ಸಲುವಾಗಿ ಹಾಗೂ ಅನೇಕ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಹಿನ್ನೆಲೆಯಲ್ಲಿ ಇಂದು ಗುಜರಾತ್ ಗೆ ಮೋದಿ ಭೇಟಿ ನೀಡಿದ್ದಾರೆ.

ಗುಜರಾತ್ ರಾಜಧಾನಿ ಗಾಂಧೀನಗರದಲ್ಲಿರುವ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಮೋದಿ ತಮ್ಮ ತಾಯಿಗೆ ಸಿಹಿ ತಿನಿಸಿ ಜನ್ಮದಿನದ ಶುಭಾಶಯ ತಿಳಿಸಿ ನಂತರ ತಾಯಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.










