ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ; ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು​…

80
firstsuddi

ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸೋಮರ್ ಸಾಲ್ಟ್ ಹೊಡೆಯುವ ವೇಳೆ ಈ ಘಟನೆ ನಡೆದಿದೆ.

ಕುಟುಂಬದ ಜೊತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿರುವ ಬಗ್ಗೆ ದಿಗಂತ್ ಆಪ್ತರಿಂದ ಮಾಹಿತಿ ದೊರೆತಿದೆ.

ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡಿರುವ ನಟನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಏರ್ ಲಿಫ್ಟ್ ಮೂಲಕ ಕರೆತರಲಾಗಿದೆ.‌ ಸದ್ಯ ನಟ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಆಸ್ಪತ್ರೆಗೆ ಕಿರುತೆರೆ ನಟರು ಆಸ್ಪತ್ರೆಗೆ ಧಾವಿಸುತ್ತಿದ್ದಾರೆ. ಅಲ್ಲದೆ ಆಪ್ತ ಸಂಬಂಧಿಗಳು ಕೂಡ ಬರುತ್ತಿದ್ದಾರೆ.

ದಿಗಂತ್ ಆರೋಗ್ಯದ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ದಿಗಂತ್ ಪತ್ನಿ ಐಂದ್ರಿತಾ ಅವರ ತಂದೆ, ನಿನ್ನೆ ಮಧ್ಯಾಹ್ನ ಘಟನೆ ನಡೆದಿದೆ. ಕತ್ತಿನ ಭಾಗಕ್ಕೆ ಪೆಟ್ಟು ಬಿದ್ದಿದೆ. ಸ್ಪೈನಲ್ ಗೆ ಮೈನರ್ ಇಂಜುರಿ ಆಗಿದ್ದು, ಆಪರೇಷನ್ ಆಗಬೇಕಾಗಿದೆ ಎಂದು ಹೇಳಿದರು.