ಚಿಕ್ಕಮಗಳೂರು : ಆಜಾದ್ ಪಾರ್ಕ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ…

65
firstsuddi

ಚಿಕ್ಕಮಗಳೂರು : ನಗರದ ಆಜಾದ್ ಪಾರ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ 8ನೇ ವಿಶ್ವ ಯೋಗ ದಿನಾಚರಣೆಯನ್ನು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇಂದು ಸಂಭ್ರಮದಿಂದ ಆಚರಿಸಿದರು.

ಯೋಗ ದಿನಾಚರಣೆ ಪ್ರಯುಕ್ತ ಶಾಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ನಸುಕಿನಲ್ಲೇ ಸೂರ್ಯ ನಮಸ್ಕಾರ ಮತ್ತು ಯೋಗಾಸನವನ್ನು ಸಾಮೂಹಿಕವಾಗಿ ಮಾಡಿದರು.

ಯೋಗೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಜಗದೀಶಾಚಾರ್, ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ನಾವು ನಿರೋಗಿಯಾಗಿ ಬದುಕಬಹುದು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯ ಶಿಕ್ಷಕ ಎಸ್.ಈ.ಲೋಕೇಶ್ವರಾಚಾರ್ ಮಾನಸಿಕ ಮತ್ತು ದೈಹಿಕ ಆರೋಗ್ಯ ಹಾಗೂ ಸಧೃಡವಾದ ಶರೀರಕ್ಕಾಗಿ ಪ್ರತಿದಿನ ಯೋಗಾಭ್ಯಾಸ ಮಾಡುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಶಿಕ್ಷಕರಾದ ಜಯಂತಿ, ನಾಗವೇಣಿ, ಸಾವಿತ್ರಿ ಉಪಸ್ಥಿತರಿದ್ದರು.