ರಾಜ್ಯಾದ್ಯಂತ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ…

58
firstsuddi

ಬೆಂಗಳೂರು : ರಾಜ್ಯಾದ್ಯಂತ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜೂನ್ 25 ರವರೆಗೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆಯಿದೆ.

ರಾಜ್ಯಾದ್ಯಂತ ಮಳೆಯಾಗುವ ಹಿನ್ನೆಲೆ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಫೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ವಿಜಯಪುರ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.