ಸಿನಿಮೀಯ ರೀತಿಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷನ ಕಿಡ್ನಾಪ್.

78
firstsuddi

ರಾಯಚೂರು: ಸಿನಿಮೀಯ ರೀತಿಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷನನ್ನು ಕಿಡ್ನಾಪ್ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ಕಿಡ್ನಾಪ್ ದೃಶ್ಯಾವಳಿಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಲಿಂಗಸುಗೂರು ತಾಲೂಕಿನ ರೋಡಲಬಂಡಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಮರೇಶ ಸಂಗಪ್ಪ ಮೇಟಿ ಅಪಹರಣಕ್ಕೊಳಗಾದ ವ್ಯಕ್ತಿ. 15 ತಿಂಗಳ ಕಾಲ ಅಧ್ಯಕ್ಷನಾಗಿ ಇತ್ತೀಚೆಗಷ್ಟೇ ಒತ್ತಾಯಪೂರ್ವಕವಾಗಿ ರಾಜೀನಾಮೆ ನೀಡಿದ್ದ ಅಮರೇಶ್ ಮೇಟಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಜೂನ್ 21 ರಂದು ಬಾಗಲಕೋಟೆ ಜಿಲ್ಲೆಯ ಬೀಳಗಿಯ ಲಾಡ್ಜ್ ನಲ್ಲಿ ತಂಗಿದ್ದ ಅಮರೇಶ್ ಮೇಟಿಯನ್ನು ಅಪಹರಣ ಮಾಡಲಾಗಿದೆ. ಈ ಕುರಿತು ಬಾಗಲಕೋಟೆ ಜಿಲ್ಲೆಯ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.