ಸೋನಿಯಾ, ಪವಾರ್, ಮಮತಾ ಬಳಿ ಬೆಂಬಲ ಕೋರಿದ ದ್ರೌಪದಿ ಮುರ್ಮು.

67
firstsuddi

ನವದೆಹಲಿ : ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು ವಿಪಕ್ಷಗಳ ಕೆಲ ನಾಯಕರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಕೋರಿದ್ದಾರೆ.

ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ದ್ರೌಪದಿ ಮುರ್ಮು ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್ ಸಿಪಿ ವರಿಷ್ಠ ಶರದ್ ಪವಾರ್ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ವಿಪಕ್ಷಗಳ ಕೆಲ ಪ್ರಮುಖ ನಾಯಕರಿಗೆ ಕರೆ ಮಾಡಿ ರಾಷ್ಟ್ರಪತಿ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಕೋರಿದ್ದಾರೆ. ದ್ರೌಪದಿ ಅವರಿಗೆ ಸೋನಿಯಾ ಗಾಂಧಿ, ಶರದ್ ಪವಾರ್ ಮತ್ತು ಮಮತಾ ಬ್ಯಾನರ್ಜಿ ಶುಭ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.