ಬೆಂಗಳೂರು : ಪ್ರಧಾನಿ ಮೋದಿ ಭೇಟಿ ವೇಳೆ ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಲಾಗಿದ್ದ ರಸ್ತೆಯಲ್ಲಿ ಗುಂಡಿ ಬಿದ್ದಿದ್ದು, ಈ ಕುರಿತು ಕಾರಣ ಕೇಳಿ ಮೂವರು ಇಂಜಿನಿಯರ್ ಗಳಿಗೆ ಬಿಬಿಎಂಪಿ ನೋಟಿಸ್ ನೀಡಿದೆ.
ಆರ್.ಆರ್ ನಗರದ ಕಾರ್ಯಪಾಲಕ ಇಂಜಿನಿಯರ್ ಎಂ.ಟಿ. ಬಾಲಾಜಿ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಚ್.ಜೆ. ರವಿ ಮತ್ತು ಸಹಾಯಕ ಇಂಜಿನಿಯರ್ ಐ.ಕೆ ವಿಶ್ವಾಸ್ ಅವರಿಗೆ ನೋಟಿಸ್ ನೀಡಲಾಗಿದೆ.
ಜೂನ್ 20 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದರು. ಮೋದಿ ಸಾಗುವ ರಸ್ತೆ ಅಭಿವೃದ್ಧಿಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸುಮಾರು 23 ಕೋಟಿ ರೂ. ವೆಚ್ಚ ಮಾಡಿತ್ತು.










