ಸಾಲುಮರದ ತಿಮ್ಮಕ್ಕನಿಗೆ ನಿವೇಶನದ ಕ್ರಯ ಪತ್ರ ಹಸ್ತಾಂತರಿಸಿದ ಸಿಎಂ ಬೊಮ್ಮಾಯಿ.

63
firstsuddi

ಬೆಂಗಳೂರು : ಸಾಲುಮರದ ತಿಮ್ಮಕ್ಕ ಅವರಿಗೆ ನಿವೇಶನ ಕ್ರಯ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಸ್ತಾಂತರಿಸಿದ್ದಾರೆ. ಇಂದು ಮುಂಜಾನೆ ರೇಸ್ ಕೋರ್ಸ್ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಸಿಎಂ ಕರಾರು ಪತ್ರ ನೀಡಿದರು.

ಕೆಲ ದಿನಗಳ ಹಿಂದಷ್ಟೇ ತಿಮ್ಮಕ್ಕ ಸಿಎಂ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಒಂದು ಸೈಟು ಹಾಗೂ ಮರಗಳನ್ನು ಬೆಳೆಸಲು ತಿಮ್ಮಕ್ಕ ಅವರಿಗೆ ಸೂಕ್ತ ಜಮೀನು ನೀಡಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದರು. ಸಿಎಂ ಸೂಚನೆ ಮೇರೆಗೆ ತಿಮ್ಮಕ್ಕನಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್ ಜೆ ಸೆಕ್ಟರ್ ನಲ್ಲಿ 50*80 ಚದರ ಅಡಿಯ ನಿವೇಶನ ನೀಡಲಾಗಿದೆ.