ಸಂಜಯ್ ರಾವತ್‍ಗೆ ಇಡಿ ಸಮನ್ಸ್ – ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ…

61
firstsuddi

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಮುಖಂಡ ಸಂಜಯ್ ರಾವತ್‍ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಅಕ್ರಮ ಹಣ ವರ್ಗಾವಣೆ ನಿಷೇಧ ಕಾಯ್ದೆಯಡಿ ಮಂಗಳವಾರ ದಕ್ಷಿಣ ಮುಂಬೈನಲ್ಲಿರುವ ತಮ್ಮ ಕಚೇರಿಗೆ ಆಗಮಿಸಿ ಹೇಳಿಕೆಯನ್ನು ದಾಖಲಿಸುವಂತೆ ಇಡಿ ತಿಳಿಸಿದೆ.

1,034 ಕೋಟಿ ರೂ. ಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾವತ್ ಅವರ ಆಸ್ತಿಯನ್ನು ಏಪ್ರೀಲ್‍ನಲ್ಲಿ ಇಡಿ ಜಪ್ತಿ ಮಾಡಿತ್ತು. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ರಾವುತ್ ಅವರಿಗೆ ಇಡಿ ಸಮನ್ಸ್ ನೀಡಿದ್ದು ಗಮನಾರ್ಹವಾಗಿದೆ.