40% ಕಮಿಷನ್ ಪ್ರಕರಣ – ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಗೆ ಗೃಹ ಸಚಿವಾಲಯದಿಂದ ಕರೆ…

71
firstsuddi

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರಿಗೆ ಕೇಂದ್ರದ ಗೃಹ ಸಚಿವಾಲಯದಿಂದ ಕರೆ ಬಂದಿದ್ದು, ಸಂಪೂರ್ಣ ವರದಿ ನೀಡುವಂತೆ ಸೂಚಿಸಿದೆ.

ಕಳೆದ ಶುಕ್ರವಾರ ಕೆಂಪಣ್ಣ ಅವರಿಗೆ ಕೇಂದ್ರ ಗೃಹ ಇಲಾಖೆಯಿಂದ ಫೋನ್ ಕರೆ ಬಂದಿತ್ತು. ಬೆಂಗಳೂರಿನ ಕಚೇರಿಗೆ ಆಗಮಿಸಿ ದಾಖಲೆಗಳನ್ನು ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಕಚೇರಿಗೆ ತೆರಳಿ ಅಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ. 2021ರ ಜುಲೈ 7ರಂದು ಪ್ರಧಾನಿ ಸಚಿವಾಲಯಕ್ಕೆ 40% ಕಮಿಷನ್ ಕುರಿತು ರಾಜ್ಯ ಗುತ್ತಿಗೆದಾರರ ಸಂಘದಿಂದ ದೂರು ನೀಡಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ದಾಖಲೆ ನೀಡಿರುವ ಗುತ್ತಿಗೆದಾರರಿಗೆ ಈಗಾಗಲೇ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ತನಿಖೆ ಮಾಡಿದರೆ ಮಾತ್ರ ಸಾಕ್ಷಿ ನೀಡುತ್ತೇವೆ. ಇಲ್ಲದಿದ್ದರೆ ಮಾಹಿತಿ ಮಾತ್ರ ನೀಡುತ್ತೇವೆ. ನಿನ್ನೆ ಬರುವುದಕ್ಕೆ ಹೇಳಿದ್ದರು. ನನಗೆ ಆರೋಗ್ಯ ಸರಿಯಿರಲಿಲ್ಲ ಅದಕ್ಕೆ ಹೋಗಿಲ್ಲ. ಇವತ್ತು ಭೇಟಿ ಆಗೋಕೆ ಹೇಳಿದ್ದಾರೆ. ಅವರು ಯಾವ ದಾಖಲೆಗಳನ್ನು ಹೇಳ್ತಾರೋ ಆ ದಾಖಲೆಗಳನ್ನ ನೀಡುತ್ತೇವೆ ಎಂದರು.