ಬೆಂಗಳೂರು : ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ ಕೆಎಸ್ಆರ್ಟಿಸಿ ಆದೇಶ ಹೊರಡಿಸಿದೆ.
ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 2022ರ ಆಗಸ್ಟ್, ಸೆಪ್ಟೆಂಬರ್, ನವೆಂಬರ್ ವರೆಗೂ ಪರೀಕ್ಷೆಗಳು ನಡೆಯಲಿದೆ. ಈ ಹಿನ್ನಲೆ ಬಸ್ ಪಾಸ್ ಅವಧಿ ವಿಸ್ತರಣೆಗೆ ಕೆಎಸ್ಆರ್ಟಿಸಿ ನಿರ್ಧರಿಸಿದೆ. ಆದರೆ ವಿದ್ಯಾರ್ಥಿಗಳು ಒಂದು ಅಥವಾ ಎರಡು ತಿಂಗಳ ಅವಧಿಗೆ ನಿಗದಿತ ಮೊತ್ತವನ್ನು ಪಾವತಿಸಿ ರಶೀದಿ ಪಡೆಯಬೇಕು. ಬಸ್ ಗಳಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳು ನಿರ್ವಾಹಕರು ಕೇಳಿದ ಸಂದರ್ಭದಲ್ಲಿ ಕಡ್ಡಾಯವಾಗಿ ರಶೀದಿ ಮತ್ತು ಹಳೆಯ ಪಾಸ್ ತೋರಿಸಬೇಕು.










