ಮಗು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ!

81
firstsuddi

ಬೆಂಗಳೂರು : ತಾಯಿಯೊಬ್ಬಳು ತನ್ನ ಮಗುವನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್. ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಗು ರಿಯಾಳನ್ನ ಕೊಂದ ತಾಯಿ ದೀಪಾ (31) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬ್ರಹ್ಮವರ ಮೂಲದ ದೀಪಾ ಸಾಫ್ಟ್ ವೇರ್ ಎಂಜಿನಿಯರ್ ಆಗಿರೋ ಆದರ್ಶ್ ಅವರನ್ನು 2017 ರಲ್ಲಿ ವರಿಸಿದ್ದರು. ಮದ್ವೆಯಾದಗಿನಿಂದಲೂ ಆರ್ ಆರ್ ನಗರದ ಮಂತ್ರಿ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದರು.

ಕಳೆದ ಒಂದು ವಾರದಿಂದ ಜ್ವರ ಹಾಗೂ ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ್ದರು. ಚಿಕಿತ್ಸೆ ಪಡೆದರೂ ನೋವು ಕಡಿಮೆ ಆಗಿರಲಿಲ್ಲ. ಹೀಗಾಗಿ ಜಿಗುಪ್ಸೆಗೊಳಗಾಗಿದ್ದ ದೀಪಾ ನಿನ್ನೆ ರಾತ್ರಿ ಮಲಗಿದ್ದ ಮಗುವಿನ ಕುತ್ತಿಗೆಗೆ ವೇಲ್ ಬಿಗಿದು ಹತ್ಯೆ ಮಾಡಿದ್ದಾರೆ. ಬಳಿಕ ತಾನು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾಯುವ ಮುನ್ನ “Nobody is responsible for it, I just felt life is full of shits. I’m sorry mom and Divya Love you Shona” ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಸ್ಥಳಕ್ಕೆ ಆರ್ ಆರ್ ನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.