ಶಿಂಧೆಯನ್ನು ಶಿವಸೇನಾ ನಾಯಕ ಸ್ಥಾನದಿಂದ ವಜಾಗೊಳಿಸಿದ ಉದ್ಧವ್ ಠಾಕ್ರೆ.

51
firstsuddi

ಮುಂಬೈ : ತಮ್ಮ ವಿರುದ್ಧ ಬಂಡಾಯವೆದ್ದಿದ್ದ ಏಕನಾಥ್ ಶಿಂಧೆ ಅವರನ್ನು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಶಿವಸೇನಾ ನಾಯಕನ ಸ್ಥಾನದಿಂದ ವಜಾಗೊಳಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಶಿಂಧೆ ಅವರನ್ನು ವಜಾ ಮಾಡಲಾಗಿದೆ ಎಂದು ಶಿವಸೇನೆ ಮಾಹಿತಿ ನೀಡಿದೆ.

ಏಕನಾಥ್ ಶಿಂಧೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದಕ್ಕಾಗಿ ನಿನ್ನೆ ಬಿಜೆಪಿ ವಿರುದ್ಧ ಠಾಕ್ರೆ ವಾಗ್ದಾಳಿ ನಡೆಸಿದ್ದರು. ಎರಡೂವರೆ ವರ್ಷಗಳ ಹಿಂದೆಯೇ ಶಿವಸೇನಾ ನಾಯಕನಿಗೆ ಸಿಎಂ ಸ್ಥಾನ ಬಿಟ್ಟುಕೊಡಲು ಬಿಜೆಪಿ ತೀರ್ಮಾನಿಸಿದ್ದರೆ, ಮಹಾ ವಿಕಾಸ್ ಅಘಾಡಿ (ಎಂವಿಎ) ಸೃಷ್ಟಿಯಾಗುತ್ತಿರಲೇ ಇಲ್ಲ. 2.5 ವರ್ಷಗಳ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತು 2019ರಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹೇಳಿದ್ದೆ. ಇದನ್ನು ಗೌರವಯುತವಾಗಿ ಆಗಲೇ ಮಾಡಬಹುದಿತ್ತು. ಶಿವಸೇನೆ ಅಧಿಕೃತವಾಗಿ ನಿಮ್ಮೊಂದಿಗೆ ಇತ್ತು (ಆ ಸಮಯದಲ್ಲಿ). ಏಕನಾಥ್ ಶಿಂಧೆ ಅವರು ಶಿವಸೇನೆ ಸಿಎಂ ಅಲ್ಲ ಎಂದು ಠಾಕ್ರೆ ಹೇಳಿದ್ದರು.