ಶಿವಮೊಗ್ಗ : ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪತ್ರಿಕಾ ವಿತರಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಸಾಗರ ತಾಲೂಕಿನಲ್ಲಿ ನಡೆದಿದೆ. ಸಾಗರದ ಬೆಳಲಮಕ್ಕಿಯ ನಿವಾಸಿ ಗಣೇಶ್ (25) ಮೃತಪಟ್ಟ ಪತ್ರಿಕಾ ವಿತರಕ.
ಇಂದು ಬೆಳಗ್ಗೆ ಗಣೇಶ್ ಸೈಕಲ್ ನಲ್ಲಿ ಪೇಪರ್ ಹಾಕಲು ಹೋಗುವಾಗ ಕೆಎಸ್ಆರ್ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಗಣೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹಿಂಬದಿ ಸವಾರ ರಾಹುಲ್ ಎಂಬವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಬೆಂಗಳೂರಿನಿಂದ ಸಾಗರ ಮಾರ್ಗವಾಗಿ ಯಲ್ಲಾಪುರ ಕಡೆ ಹೋಗುತ್ತಿತ್ತು. ಈ ವೇಳೆ ಘಟನೆ ನಡೆದಿದೆ.










