ಪಿಎಸ್‍ಐ ನೇಮಕಾತಿ ಅಕ್ರಮ ; ಎಡಿಜಿಪಿ ಅಮೃತ್ ಪೌಲ್ ಅರೆಸ್ಟ್.

75
firstsuddi

ಬೆಂಗಳೂರು : ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಆಂತರಿಕಾ ಭದ್ರತಾ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ರನ್ನು ಐಎಸ್ ಡಿ ಗೆ ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

545 ಪಿಎಸ್ ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ನೇಮಕಾತಿ ಹಗರಣದಲ್ಲಿ ಅಭ್ಯರ್ಥಿಗಳಿಂದ ಡೀಲ್ ಮಾಡಿಕೊಂಡಿರುವ ಬಗ್ಗೆ ಎಡಿಜಿಪಿ ಮೇಲೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಸಿಐಡಿ ತನಿಖಾಧಿಕಾರಿಗಳು ಜಾರಿಗೊಳಿಸಿದ್ದ ನೋಟಿಸ್​ ಗೆ ಅಮೃತ್ ಪೌಲ್ ನಾಲ್ಕು ಬಾರಿ ವಿಚಾರಣೆಗೆ ಹಾಜರಾಗಿದ್ದರು.‌‌ ಇಂದು ಸಹ ವಿಚಾರಣೆಗೆ ಹಾಜರಾಗಲು ಸಿಐಡಿ ನೋಟಿಸ್ ಜಾರಿ ಮಾಡಿದ್ದರು. ಇಂದು ವಿಚಾರಣೆ ನಡೆಸಿದ ಬಳಿಕ ಮತ್ತಷ್ಟು ಮಾಹಿತಿ ಕಲೆ ಹಾಕಲು ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.