ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಚಿಂತಾಜನಕ ; ದೆಹಲಿಯ ಏಮ್ಸ್​​​ಗೆ ಏರ್​ಲಿಫ್ಟ್​.

37
firstsuddi

ನವದೆಹಲಿ : ರಾಷ್ಟ್ರೀಯ ಜನತಾ ದಳ(ಆರ್ ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಿನ್ನೆ ಪಾಟ್ನಾ ಆಸ್ಪತ್ರೆಯಿಂದ ವಿಮಾನದ ಮೂಲಕ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಮೆಟ್ಟಿಲಿನಿಂದ ಕೆಳಗೆ ಬಿದ್ದಿದ್ದ ಲಾಲೂ ಪ್ರಸಾದ್ ಯಾದವ್ ಅವರು ಪಾಟ್ನಾದ ಪಾರಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಇದೀಗ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಕಂಡು ಬಂದಿರುವ ಕಾರಣ ಏಮ್ಸ್ ಗೆ ದಾಖಲಿಸಲಾಗಿದೆ.

ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ತೇಜಸ್ವಿ ಯಾದವ್, ಲಾಲೂ ಪ್ರಸಾದ್ ಅವರು ತಮ್ಮ ಮನೆಯಲ್ಲಿ ಬಿದ್ದ ನಂತರ ಭುಜ ಸೇರಿದಂತೆ ಮೂರು ಸ್ಥಳಗಳಲ್ಲಿ ಮುರಿತಕ್ಕೆ ಒಳಗಾಗಿದ್ದಾರೆ. ಅವರಿಂದ ಈಗ ಯಾವುದೇ ರೀತಿಯ ಚಲನೆ ಸಾಧ್ಯವಾಗುತ್ತಿಲ್ಲ. ಏಮ್ಸ್ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದು, ಮುಂದಿನ ಚಿಕಿತ್ಸೆ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ.

ಲಾಲೂ ಪ್ರಸಾದ್ ಯಾದವ್ ಪತ್ನಿ ರಾಬ್ರಿ ದೇವಿ, ಆತಂಕ ಪಡುವ ಅಗತ್ಯವಿಲ್ಲ, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಶೀಘ್ರವಾಗಿ ಚೇತರಿಸಿಕೊಳ್ಳಲು ಎಲ್ಲರೂ ಪ್ರಾರ್ಥಿಸಬೇಕು ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.