ಲಕ್ನೋ: ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಉತ್ತರ ಪ್ರದೇಶದ ಬರೇಲಿಯಲ್ಲಿ ಬಂಧಿಸಲಾಗಿದೆ.
ನಾಸಿರ್ ಹುಸೇನ್ ಬಂಧಿತ ಆರೋಪಿ. ಈತ ನೂಪುರ್ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ.
ನಾಸಿರ್ ಹುಸೇನ್ ಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್ ಅವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದ ಹಾಗೂ ಕೋಮು ಉದ್ವಿಗ್ನತೆಗೆ ಪ್ರಚೋದಿಸಿದ್ದ. ಈ ಹಿನ್ನೆಲೆ ಆತನನ್ನು ಬಂಧಿಸಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜ್ ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.










