ಹೃದಯಾಘಾತ – ತಮಿಳು ನಟ ವಿಕ್ರಮ್ ಆಸ್ಪತ್ರೆಗೆ ದಾಖಲು…

57
firstsuddi

ತಮಿಳಿನ ಖ್ಯಾತ ನಟ ವಿಕ್ರಮ್ ಅವರಿಗೆ ಇಂದು ಹೃದಯಾಘಾತವಾಗಿದ್ದು, ಚೈನ್ನೈನ ಕಾವೇರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಟ ವಿಕ್ರಮ್ ಗೆ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯಕ್ಕೆ ವಿಕ್ರಮ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಇಂದು ಸಂಜೆ 6 ಗಂಟೆಗೆ ವಿಕ್ರಮ್ ತಮ್ಮ ಚಿತ್ರ ‘ಪೊನ್ನಿಯಿನ್ ಸೆಲ್ವನ್’ ನ ಟ್ರೇಲರ್ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿತ್ತು. ಆದರೆ, ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡು ಬಂದಿದೆ.

ವಿಕ್ರಮ್ ಅನ್ನಿಯನ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ತಮಿಳು ಚಿತ್ರಗಳ ಜೊತೆಯಲ್ಲೇ ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ.