ಬೆಂಗಳೂರು: ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿದ್ದ ಕಾಮುಕನನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗಂಗಾಧರ್ ಬಂಧಿತ ಆರೋಪಿ. ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಗಂಗಾಧರ್, ಜುಲೈ 3ರಂದು ನಗರದ ಪ್ಯಾಲೇಸ್ ರಸ್ತೆಯ ಕಾವೇರಿ ಜಂಕ್ಷನ್ ಬಳಿ ಸೈಕ್ಲೊಥಾನ್ ನಲ್ಲಿ ಸಾಗುತ್ತಿದ್ದ ಮಹಿಳೆಯರ ಹಿಂಭಾಗ ಸ್ಪರ್ಶಿಸಿ ಅನುಚಿತವಾಗಿ ವರ್ತಿಸಿದ್ದ. ಅಲ್ಲದೇ ನಗರದ ಬೇರೆ ಬೇರೆ ಭಾಗದಲ್ಲೂ ಇದೇ ರೀತಿ ಕೃತ್ಯ ಎಸಗಿದ್ದಾನೆ ಎನ್ನಲಾಗ್ತಿದೆ.
ಈ ಬಗ್ಗೆ ಇಬ್ಬರು ಮಹಿಳೆಯರು ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಅಕ್ಕಪಕ್ಕದ ಸಿಸಿಟಿವಿ ಕ್ಯಾಮರಾಗಳನ್ನ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.










