ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ಪಲಾಯನ…

65
firstsuddi

ಕೊಲಂಬೊ: ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಇಂದು ಕೊಲಂಬೊದಲ್ಲಿರುವ ತಮ್ಮ ಅಧಿಕೃತ ನಿವಾಸದಿಂದ ಪಲಾಯನ ಮಾಡಿದ್ದಾರೆ ಎಂದು ವರದಿಯಾಗಿದೆ. ಅವರ ಮನೆಯ ಸುತ್ತಲೂ ಪ್ರತಿಭಟನಾಕಾರರು ಜಮಾಯಿಸಿದ್ದರು. ಹೀಗಾಗಿ ಗೋಟಬಯ ರಾಜಪಕ್ಸ ಅವರನ್ನು ಸುರಕ್ಷತಾ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಹುದ್ದೆಯಿಂದ ಕೆಳಗಿಳಿಯುವಂತೆ ಒತ್ತಾಯಿಸಿ ಪ್ರತಿಭಟನೆಗಳನ್ನು ನಡೆಸಿದ್ದರು. ಹೀಗಾಗಿ ಪ್ರತಿಭಟನಾಕಾರರ ನಿಯಂತ್ರಣಕ್ಕೆ ಕರ್ಫ್ಯೂ ವಿಧಿಸಲಾಗಿತ್ತು. ಆದರೆ ಕರ್ಫ್ಯೂ ಹಿಂತೆಗೆದುಕೊಂಡ ಬೆನ್ನಲ್ಲೇ ಪ್ರತಿಭಟನೆ ಕಾವೇರಿದೆ.

ಶ್ರೀಲಂಕಾದ ರಾಜಧಾನಿ ಕೊಲಂಬೋದಲ್ಲಿ ಇಂದು ಸಾವಿರಾರು ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್ ಗಳನ್ನು ಭೇದಿಸಿ, ಅಧ್ಯಕ್ಷರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ. ಸ್ವಿಮ್ಮಿಗ್ ಪೂಲ್ ಗೆ ಇಳಿದು ಈಜಾಡಿದ್ದಾರೆ. ಸೋಫಾ, ಬೆಡ್ ಗಳ ಮೇಲೆ ಕುಣಿದಾಡಿದ್ದಾರೆ. ಅಡುಗೆ ಮನೆಗೂ ನುಗ್ಗಿ, ಹಸಿವನ್ನು ನೀಗಿಸಿಕೊಂಡಿದ್ದಾರೆ.

ನೆರೆಯ ದ್ವೀಪ ರಾಷ್ಟ್ರ ಶ್ರೀಲಂಕಾದ ಆರ್ಥಿಕ ಪರಿಸ್ಥಿತಿ ದಿನೇ ದಿನೇ ಬಿಗಡಾಯಿಸುತ್ತಲೇ ಇದೆ. ವಿದೇಶದಿಂದ ಪಡೆದಿದ್ದ ಸಾಲದ ಮರುಪಾವತಿಯನ್ನು ನಿಲ್ಲಿಸುತ್ತಿರುವುದಾಗಿ ಲಂಕಾ ಘೋಷಿಸಿದೆ. ಇಂಧನದಂತಹ ಅಗತ್ಯ ವಸ್ತುಗಳ ಆಮದುಗಳಿಗೆ ಸೀಮಿತ ವಿದೇಶಿ ಮೀಸಲು ಅಗತ್ಯವಿದೆ. ಸಾಲ ಪಾವತಿ ಮಾಡುವುದು ಅಸಾಧ್ಯ ಎಂಬ ಹಂತಕ್ಕೆ ಬಂದಿದೆ.