ನಿಗಮ ಮಂಡಳಿ ಅಧ್ಯಕ್ಷರ ನಾಮ ನಿರ್ದೇಶನ ರದ್ದು…

59
firstsuddi

ಬೆಂಗಳೂರು : ರಾಜ್ಯ ಸರ್ಕಾರ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ ಪಡೆದಿದೆ. 46 ನಿಗಮ ಮಂಡಳಿಗಳ ಅಧ್ಯಕ್ಷರ ನಾಮ ನಿರ್ದೇಶನ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರದ್ದು ಪಡಿಸಿ ಆದೇಶ ಹೊರಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ ವಿವಿಧ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನೇಮಕಾತಿಯನ್ನು ರದ್ದು ಮಾಡಲಾಗಿದೆ. ಒಂದೂವರೆ ವರ್ಷದ ಅಧಿಕಾರಾವಧಿ ಪೂರ್ಣಗೊಳಿಸಿದ ಮಾನದಂಡದ ಅಡಿಯಲ್ಲಿ ರದ್ದು ಮಾಡಲಾಗಿದೆ. ಸಚಿವ ಆರ್. ಅಶೋಕ್, ಎಂಎಲ್ ಸಿ ಲಕ್ಷ್ಮಣ್ ಸವದಿ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಇದ್ದ ತ್ರಿಸದಸ್ಯ ಸಮಿತಿ ರದ್ದು ಪಟ್ಟಿ ತಯಾರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಿದ್ದರು. ನಿನ್ನೆ ಮುಖ್ಯಮಂತ್ರಿಗಳು ಸಮಿತಿ ಸದಸ್ಯರ ಜೊತೆ ಚರ್ಚೆ ನಡೆಸಿ ಅಂತಿಮ ಪಟ್ಟಿ ಸಿದ್ದಪಡಿಸಿದ್ದರು.

ರಾಜ್ಯ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್. ನಂದೀಶ್ ಹಂಜೆ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ್, ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶೃತಿ ಸೇರಿದಂತೆ 46 ನಿಗಮ, ಮಂಡಳಿಗಳ ಅಧ್ಯಕ್ಷರ ನಾಮನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿ ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಖಾಲಿಯಾಗಿರುವ ನಿಗಮ ಮಂಡಳಿ ಅಧ್ಯಕ್ಷರ ಸ್ಥಾನಗಳಿಗೆ ಇನ್ನೆರಡು ದಿನದಲ್ಲಿ ನೂತನ ಅಧ್ಯಕ್ಷರ ನೇಮಕ ಮಾಡಲಾಗುತ್ತದೆ. ಅಲ್ಲದೇ, ಉಪಾಧ್ಯಕ್ಷರು ಮತ್ತು ಸದಸ್ಯರನ್ನು ಕೂಡ ಆದಷ್ಟು ಬೇಗ ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.