ನಟ ಶಿವರಂಜನ್ ಮೇಲೆ ಗುಂಡಿನ ದಾಳಿ – ಪ್ರಾಣಾಪಾಯದಿಂದ ಪಾರು…

53
firstsuddi

ಬೆಳಗಾವಿ : ಹಿರಿಯ ಚಿತ್ರನಟ ಶಿವರಂಜನ್ ಬೋಳ್ಳಣ್ಣವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಿಲ್ಲೆಯ ಬೈಲಹೊಂಗಲ ಪಟ್ಟಣದ ಹನುಮಂತ ದೇವಸ್ಥಾನ ಬಳಿಯಿರುವ ಅವರ ಮನೆ ಎದುರು ಘಟನೆ ನಡೆದಿದೆ. ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ ಶಿವರಂಜನ್ ಮೇಲೆ ಮೂರು ಸುತ್ತು ಗುಂಡಿನ ದಾಳಿ ನಡೆಸಿದ್ದಾನೆ. ಆದರೆ ಗುರಿ ತಪ್ಪಿದ್ದರಿಂದ ಕೂದಲೆಳೆ ಅಂತರದಲ್ಲಿ ನಟ ಪಾರಾಗಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ.