ಆಟೋ – ಕಾರು ನಡುವೆ ಭೀಕರ ಅಪಘಾತ ; ಸ್ಥಳದಲ್ಲೇ ಮೂವರು ಸಾವು…

102
firstsuddi

ಮಂಡ್ಯ : ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ನಡೆದಿದೆ.

ಮೃತರನ್ನು ಆಟೋ ಚಾಲಕ ಶ್ರೀನಿವಾಸ್, ರವಿ ಕುಮಾರ್. ಭಾಸ್ಕರ್ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕದ ಗುಂಡಿಗೆ ಆಟೋ ಬಿದಿದ್ದು, ಆಟೋ ಮೇಲೆ ಕಾರು ಬಿದ್ದಿದೆ. ಈ ವೇಳೆ ಆಟೋದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಮಳವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.