ಕಪಿಲಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು, ಎದುರಾಳಿಯ ಒಂದೇ ಏಟಿಗೆ ಪ್ರಾಣ ಬಿಟ್ಟ ಕಿಕ್ ಬಾಕ್ಸರ್.

68
firstsuddi

ಮೈಸೂರು/ಬೆಂಗಳೂರು : ತುಂಬಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹೆಜ್ಜಿಗೆ ಗ್ರಾಮದ ಬಳಿ ನಡೆದಿದೆ.

ಅಹಮದ್ ಕರೀಂ ನಾಪತ್ತೆಯಾದ ಯುವಕ. ಹೆಜ್ಜಿಗೆ ಸೇತುವೆಯಿಂದ ಮೂವರು ಯುವಕರು ನದಿಗೆ ಹಾರಿದ್ದು, ನೀರಿನ ರಭಸಕ್ಕೆ ಅಹಮದ್ ಕರೀಂ ನಾಪತ್ತೆಯಾಗಿದ್ದು, ಉಳಿದಿಬ್ಬರು ಈಜಿ ದಡ ಸೇರಿದ್ದಾರೆ. ನಾಪತ್ತೆಯಾದ ಯುವಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎದುರಾಳಿಯ ಒಂದೇ ಒಂದು ಏಟಿಗೆ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಬಾಕ್ಸರ್ ಚಿಕಿತ್ಸೆ ಫಲಕಾರಿಯಾಗದೇ ಪ್ರಾಣ ಬಿಟ್ಟಿದ್ದಾರೆ. ಮೈಸೂರಿನ ಹೊಸಕೇರಿ ನಿವಾಸಿ 23 ವರ್ಷದ ಯುವಕ ನಿಖಿಲ್ ಸುರೇಶ್ ಮೃತಪಟ್ಟ ಕಿಕ್ ಬಾಕ್ಸರ್. ಜುಲೈ 10 ರಂದು ಬೆಂಗಳೂರಿನ ಕೆಂಗೇರಿಯಲ್ಲಿ A-1 ಕಿಕ್ ಬಾಕ್ಸರ್ ಆರ್ಗನೈಸೇಷನ್ ವತಿಯಿಂದ ಸ್ಪರ್ಧೆ ಆಯೋಜನೆಗೊಂಡಿತ್ತು.

ಎದುರಾಳಿ ತಲೆಗೆ ಹೊಡೆದ ಒಂದೇ ಏಟಿಗೆ ಬಾಕ್ಸಿಂಗ್ ರಿಂಗ್ ನಲ್ಲಿಯೇ ನಿಖಿಲ್ ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಎರಡು ದಿನಗಳ ಕಾಲ ಕೋಮಾದಲ್ಲಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಕಿಕ್ ಬಾಕ್ಸಿಂಗ್ ಆಯೋಜಿಸಿದ್ದ ರವಿಶಂಕರ್ ಪರಾರಿಯಾಗಿದ್ದು ಜ್ಞಾನಭಾರತಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.