ಹಾಡಹಗಲೇ ಕುಖ್ಯಾತ ರೌಡಿ ಹಂದಿ ಅಣ್ಣಿ ಬರ್ಬರ ಹತ್ಯೆ…

80
firstsuddi

ಶಿವಮೊಗ್ಗ : ಹಾಡಹಗಲೇ ಕುಖ್ಯಾತ ರೌಡಿ ಹಂದಿ ಅಣ್ಣಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಬೆಳಗ್ಗೆ 10:40 ರ ಸುಮಾರಿಗೆ ಘಟನೆ ನಡೆದಿದೆ. ಇನ್ನೋವಾ ಕಾರಿನಲ್ಲಿ ಬಂದ ಆರೇಳು ಜನರ ಗುಂಪು ವಿನೋಬಾನಗರ ಚೌಕಿ ಬಳಿ ರೌಡಿಶೀಟರ್ ಹಂದಿ ಅಣ್ಣಿಯನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ.

ಹಂದಿ ಅಣ್ಣಿಯು ಲವ-ಕುಶ ಎಂಬ ಅವಳಿ ಸಹೋದರರನ್ನು ಸಾಗರ ರಸ್ತೆಯಲ್ಲಿ 12 ವರ್ಷಗಳ ಹಿಂದೆ ಕೊಲೆ ಮಾಡಿದ್ದ. ಈ ಮುಖೇನ ಪಾತಕ ಲೋಕ ಪ್ರವೇಶಿಸಿದ್ದ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಅಣ್ಣಿಯ ಶವವನ್ನು ಮೆಗ್ಗಾನ್ ಶವಾಗಾರಕ್ಕೆ ರವಾನಿಸಲಾಗಿದೆ.

ವಿನೋಬಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.