ಶ್ರೀಲಂಕಾ ಹಂಗಾಮಿ ಅಧ್ಯಕ್ಷರಾಗಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಪ್ರಮಾಣವಚನ ಸ್ವೀಕಾರ…

54
firstsuddi

ಕೊಲಂಬೊ : ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸದ್ಯ ಅವರು ಸಿಂಗಾಪುರದಲ್ಲಿ ಆಶ್ರಯ ಪಡೆದಿದ್ದಾರೆ ಎನ್ನಲಾಗಿದ್ದು, ಅಲ್ಲಿಂದಲೇ ಶ್ರೀಲಂಕಾ ಸಂಸತ್ ಸ್ಪೀಕರ್ ಮಹಿಂದಾ ಯಾಪಾ ಅಬೇವರ್ದನ ಅವರಿಗೆ ರಾಜೀನಾಮೆ ಪತ್ರವನ್ನು ಇ-ಮೇಲ್ ಮಾಡಿದ್ದಾರೆ. ಇಂದು ಬೆಳಗ್ಗೆ ಅಧ್ಯಕ್ಷ ರಾಜಪಕ್ಸ ಅವರು ರಾಜೀನಾಮೆ ನೀಡಿದ್ದಾರೆ ಎಂದು ಸ್ಪೀಕರ್ ಅಧಿಕೃತವಾಗಿ ಘೋಷಿಸಿದ್ದಾರೆ.

ಹೊಸ ನಾಯಕನನ್ನು ಆಯ್ಕೆ ಮಾಡುವವರೆಗೆ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಹಾಗೂ ಹೊಸ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ 7 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸ್ಪೀಕರ್ ತಿಳಿಸಿದ್ದಾರೆ.