ಉಪರಾಷ್ಟ್ರಪತಿ ಹುದ್ದೆ : ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್.

130
firstsuddi

ನವದೆಹಲಿ : ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಇಂದು ನಾಮಪತ್ರ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಮತ್ತಿತರ ನಾಯಕರ ನೇತೃತ್ವದಲ್ಲಿ ಧನಕರ್ ಅವರು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ರಾಜಸ್ಥಾನದಲ್ಲಿ ಬಿಜೆಪಿಯೊಂದಿಗೆ ಸುದೀರ್ಘ ರಾಜಕೀಯ ಇತಿಹಾಸ ಹೊಂದಿದ್ದ ಧನಕರ್ ರನ್ನು ಈ ಹಿಂದೆ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ನೇಮಕ ಮಾಡಲಾಗಿತ್ತು. ಇದೀಗ ಅವರು ಉಪ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿಯಾಗಿದ್ದು, ಇವರು ಪ್ರತಿಪಕ್ಷಗಳು ಕಣಕ್ಕಿಳಿಸಿರುವ ಹಿರಿಯ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವಾ ಅವರನ್ನು ಚುನಾವಣೆಯಲ್ಲಿ ಎದುರಿಸಲಿದ್ದಾರೆ. 

ಉಪ ರಾಷ್ಟ್ರಪತಿ ಚುನಾವಣೆಗೆ ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜುಲೈ 22ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ಮತ್ತು ಆಗಸ್ಟ್ 6 ರಂದು ಮತದಾನ ನಡೆಯಲಿದ್ದು, ಅಂದು ಸಂಜೆಯೇ ಫಲಿತಾಂಶ ಹೊರ ಬೀಳಲಿದೆ.