ದೇಶದಲ್ಲಿ 15,528 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,37,83,062ಕ್ಕೆ ಏರಿಕೆ

54
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,528 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,37,83,062ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 25 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,25,785ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,37,83,062 ಮಂದಿ ಸೋಂಕಿತರ ಪೈಕಿ ಈವರೆಗೆ 4,31,13,623 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.