ಉಪರಾಷ್ಟ್ರಪತಿ ಹುದ್ದೆ : ಮಾರ್ಗರೇಟ್ ಆಳ್ವ ನಾಮಪತ್ರ ಸಲ್ಲಿಕೆ…

90
firstsuddi

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಪ್ರತಿಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಶಿವಸೇನೆಯ ಸಂಜಯ್ ರಾವತ್ ಮತ್ತು ಇತರ ಪ್ರತಿಪಕ್ಷದ ನಾಯಕರು ಹಾಜರಿದ್ದರು.

ಆಗಸ್ಟ್ 6 ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಬಹಿರಂಗಗೊಳ್ಳಲಿದೆ. ಈಗಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧಿಕಾರಾವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ.