ಶ್ರೀಲಂಕಾಗೆ ರನಿಲ್ ವಿಕ್ರಮಸಿಂಘೆ ಹೊಸ ಅಧ್ಯಕ್ಷ.

51
firstsuddi

ಕೊಲಂಬೊ : ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಅವರು ಆಯ್ಕೆಯಾಗಿದ್ದಾರೆ.

ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿರುವ ಮಧ್ಯದಲ್ಲೇ ದೇಶಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಇಂದು ಚುನಾವಣೆ ನಡೆಯಿತು. ಇಂದೇ ಚುನಾವಣೆ ಫಲಿತಾಂಶವೂ ಹೊರಬಿದ್ದಿದ್ದು ಹಂಗಾಮಿ ಅಧ್ಯಕ್ಷರಾಗಿದ್ದ ರನಿಲ್ ವಿಕ್ರಮಸಿಂಘೆ ರಾಷ್ಟ್ರದ 9ನೇ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇಂದು ಸಂಸತ್ತಿನಲ್ಲಿ ಬಿಗಿ ಬಂದೋಬಸ್ತ್ ನಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ವಿಕ್ರಮಸಿಂಘೆಗೆ ಅಧಿಕ ಮತಗಳು ಬಿದ್ದವು. ಇನ್ನು ಕಣದಲ್ಲಿದ್ದ ಸಂಸದರಾದ ಡಲ್ಲಾಸ್ ಅಲಹೆಪ್ಪುರುಮಾ ಮತ್ತು ಅನುರಾ ಕುಮಾರಾ ಡಿಸ್ಸನಾಯಕೆ ಅಲ್ಪ ಮತ ಗಳಿಸಿ ಸೋಲು ಅನುಭವಿಸಿದ್ದಾರೆ.

ಹಿಂದಿನ ಅಧ್ಯಕ್ಷ ಗೊಟಬಯ ರಾಜಪಕ್ಸ ರಾಜೀನಾಮೆ ನೀಡಿದ ನಂತರ ಹಂಗಾಮಿ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಅಧಿಕಾರ ವಹಿಸಿಕೊಂಡಿದ್ದರು.

ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ರನಿಲ್ ವಿಕ್ರಮಸಿಂಘೆ, ನನ್ನ ಮುಂದೆ ದೊಡ್ಡ ಸವಾಲಿದೆ. ಆರ್ಥಿಕವಾಗಿ ದಿವಾಳಿಯಾಗಿರುವ ರಾಷ್ಟ್ರವನ್ನು ಮತ್ತೆ ಕಟ್ಟಬೇಕಿದೆ. ಜನರು ಬೆಂಬಲ ನೀಡಬೇಕು ಎಂದು ಕೋರಿದ್ದಾರೆ.