ಕವರ್ ಸಮೇತ ಚಾಕೊಲೇಟ್ ನುಂಗಿ 6 ವರ್ಷದ ಬಾಲಕಿ ಸಾವು…

48
firstsuddi

ಉಡುಪಿ : ಚಾಕೊಲೇಟ್ ತಿನ್ನುವಾಗ ಕವರ್ ನುಂಗಿದ ಪರಿಣಾಮ ಉಸಿರುಗಟ್ಟಿ ಬಾಲಕಿ ಮೃತಪಟ್ಟ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಬವಳಾಡಿ ಗ್ರಾಮದಲ್ಲಿ ನಡೆದಿದೆ.

ಸಮನ್ವಿ (6) ಮೃತಪಟ್ಟ ಬಾಲಕಿಯಾಗಿದ್ದು, ಉಪ್ಪುಂದ ಸ್ಥಳೀಯ ಆಂಗ್ಲ ಮಾಧ್ಯಮ ಸ್ಕೂಲ್ ವಿದ್ಯಾರ್ಥಿನಿಯಾಗಿದ್ದಳು. ಶಾಲೆಯ ಬಸ್ಸಿಗೆ ಕಾಯುತ್ತಿರುವ ಸಮಯದಲ್ಲಿ ಸಮನ್ವಿ ಪ್ಲಾಸ್ಟಿಕ್ ಕವರ್ ಸಮೇತ ಚಾಕೊಲೇಟ್ ತಿಂದಿದ್ದಾಳೆ. ಈ ವೇಳೆ ಚಾಕೊಲೇಟ್ ಬಾಲಕಿ ಗಂಟಲಲ್ಲಿ ಸಿಲುಕಿಕೊಂಡು ಉಸಿರುಗಟ್ಟಿ ಶಾಲಾ ವಾಹನದಲ್ಲಿಯೇ ಕೊನೆಯುಸಿರೆಳೆದಿದ್ದಾಳೆ ಎನ್ನಲಾಗಿದೆ.

ಬಾಲಕಿಯ ಸಾವಿಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ಬಾಲಕಿ ಮೃತದೇಹ ರವಾನೆ ರವಾನಿಸಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.