ಸಿಧು ಮೂಸೆವಾಲಾ ಹತ್ಯೆ ಪ್ರಕರಣ : ಪೊಲೀಸರ ಗುಂಡಿನ ದಾಳಿಗೆ ನಾಲ್ವರು ಆರೋಪಿಗಳು ಬಲಿ…

72
firstsuddi

ಅಮೃತಸರ್ : ಪಂಜಾಬಿ ಖ್ಯಾತ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳು ಪೊಲೀಸರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಅಮೃತಸರ್ ದ ಚೋಚಾ ಭಕ್ನಾ ಗ್ರಾಮದಲ್ಲಿ ಎನ್ ಕೌಂಟರ್ ನಡೆದಿದೆ.

ಗಾಯಕ, ರಾಜಕೀಯ ನಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಶಂಕಿತ ಆರೋಪಿಗಳು ಮತ್ತು ಪಂಜಾಬ್ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ಮನೆಯಿಂದ ಜನರು ಹೊರಬಾರದಂತೆ ಪೊಲೀಸರು ಈಗಾಗಲೇ ಆದೇಶ ಹೊರಡಿಸಿದ್ದರು.

ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ ಗ್ಯಾಂಗ್ ಸ್ಟರ್ ಗಳಾದ ಮನ್ ಪ್ರೀತ್ ಮನ್ನು, ಜಗರೂಪ್ ರೂಪ್ ಸೇರಿದಂತೆ ಒಟ್ಟು ನಾಲ್ಕು ಜನರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಮೂವರು ಪೊಲೀಸ್ ಅಧಿಕಾರಿಗಳಿಗೆ ಗಾಯಗಳಾಗಿದ್ದು, ಇದೇ ವೇಳೆ ಒಬ್ಬ ಪತ್ರಕರ್ತ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಶುಹುದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲರನ್ನು ಮೇ 29ರಂದು ಪಂಜಾಬ್ ನ ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪಂಜಾಬ್, ದೆಹಲಿ ಮತ್ತು ಮುಂಬೈ ಪೊಲೀಸರು ಮೂಸೆವಾಲಾ ಪ್ರಕರಣದಲ್ಲಿ ಹಲವಾರು ಮಂದಿಯನ್ನು ಬಂಧಿಸಿದ್ದಾರೆ.