ನವದೆಹಲಿ: ಕೇಂದ್ರೀಯ ಪೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ)ಯ 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದೆ.
ಈ ವರ್ಷ, 12 ನೇ ತರಗತಿಯಲ್ಲಿ ಒಟ್ಟಾರೆ ಶೇಕಡಾ 92.71 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ cbseresults.nic.in ನಲ್ಲಿ ಪರಿಶೀಲಿಸಬಹುದು.
ಸಿಬಿಎಸ್ಇ ಮಂಡಳಿಯ ಅಧಿಕೃತ ವೆಬ್ ಸೈಟ್ ಗಳ ಜೊತೆಗೆ results.gov.in ಮತ್ತು digilocker.gov.in ಜಾಲತಾಣಗಳಲ್ಲಿಯೂ ಫಲಿತಾಂಶ ಲಭ್ಯವಿರಲಿದೆ. ಪ್ರಸಕ್ತ ಸಾಲಿನಲ್ಲಿ ಒಟ್ಟು 14,44,341 ಮಂದಿ ಪರೀಕ್ಷೆಗಾಗಿ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 14,35,366 ಮಂದಿ ಪರೀಕ್ಷೆಗೆ ಹಾಜರಾಗಿದ್ದರು.










