ಅವಿವಾಹಿತ ಮಹಿಳೆಗೆ ಗರ್ಭಪಾತಕ್ಕೆ ಅವಕಾಶ ನೀಡಿದ ಸುಪ್ರೀಂಕೋರ್ಟ್.

82
firstsuddi

ನವದೆಹಲಿ : ಗರ್ಭಿಣಿಯಾದ ಅವಿವಾಹಿತ ಮಹಿಳೆಗೆ ತನ್ನ 24 ವಾರಗಳ ಗರ್ಭವನ್ನು ತೆಗೆದುಹಾಕಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.

ಲಿವ್-ಇನ್ ರಿಲೇಷನ್ ಶಿಪ್ ನಲ್ಲಿರುವಾಗ ಗರ್ಭಿಣಿಯಾಗಿದ್ದ ಅವಿವಾಹಿತ ಮಹಿಳೆಯೊಬ್ಬರು ತನಗೆ ಬೇಡವಾದ 24 ವಾರಗಳ ಭ್ರೂಣದ ಗರ್ಭಪಾತಕ್ಕೆ ಅವಕಾಶ ನೀಡುವಂತೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕೋರ್ಟ್ ಆಕೆಯ ಮನವಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಮಹಿಳೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಮಹಿಳೆ ಅವಿವಾಹಿತೆ ಎಂಬ ಕಾರಣಕ್ಕೆ ಮಹಿಳೆಯ ಗರ್ಭಪಾತ ಅನುಮತಿ ನಿರಾಕರಿಸಲು ಸಾಧ್ಯವಿಲ್ಲ ಎಂದಿರುವ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ದೆಹಲಿಯ ಏಮ್ಸ್ ಮುಖ್ಯಸ್ಥರಿಗೆ ಸೂಚನೆ ನೀಡಿದ್ದು ವೈದ್ಯಕೀಯ ಮಂಡಳಿ ಸ್ಥಾಪಿಸಿ ಮಹಿಳೆಗೆ ಯಾವುದೇ ಅಪಾಯವಾಗದಂತೆ ಗರ್ಭಪಾತ ಮಾಡಿಸಲು ಸೂಚಿಸಿದೆ.