ತಿರುವನಂತಪುರಂ: ಕೇರಳದಲ್ಲಿ 3ನೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಈ ಹಿಂದೆಯೂ ಸಹ ಕೇರಳದಲ್ಲಿಯೇ ಎರಡು ಮಂಕಿಪಾಕ್ಸ್ ಪ್ರಕರಣಗಳು ದೃಢಪಟ್ಟಿದ್ದವು.
ಯುಎಇಯಿಂದ ಮಲಪ್ಪುರಂಗೆ ಜುಲೈ 6ರಂದು ಹಿಂತಿರುಗಿದ್ದ ಕೇರಳದ 35 ವರ್ಷದ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ.
ಈ ಕುರಿತು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದು, ಮಲಪ್ಪುರಂ ಮೂಲದವರು ಜುಲೈ 6 ರಂದು ರಾಜ್ಯಕ್ಕೆ ಆಗಮಿಸಿದ್ದು, ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.










