ಸೋನಿಯಾ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ – ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ…

76
firstsuddi

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿ ಇಂದು ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿದೆ. ಇತ್ತ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.

ಪಾರ್ಲಿಮೆಂಟ್ ನಿಂದ ವಿಜಯ್‍ಚೌಕ್‍ವರೆಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರ ಜೊತೆ ರಸ್ತೆ ಮೇಲೆ ಕುಳಿತು ರಾಹುಲ್ ಗಾಂಧಿ ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ದೆಹಲಿ ಪೊಲೀಸರು ರಾಹುಲ್ ಗಾಂಧಿ, ರಾಜ್ಯದ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವು ಸಂಸದರನ್ನು ವಶಕ್ಕೆ ಪಡೆದರು.

ಹಣದುಬ್ಬರ, ನಿರುದ್ಯೋಗದ ಬಗ್ಗೆ ಚರ್ಚಿಸಲು ಸಂಸತ್ತಿನ ಒಳಗೂ ಬಿಡುತ್ತಿಲ್ಲ. ಅದರ ವಿರುದ್ಧ ಹೋರಾಟ ಮಾಡಲೂ ಅವಕಾಶ ನೀಡದೆ ನಮ್ಮನ್ನೂ ಸೇರಿದಂತೆ ಸಂಸದರನ್ನು ಬಂಧಿಸಲಾಗುತ್ತಿದೆ ಎಂದು ದೆಹಲಿಯ ವಿಜಯ್ ಚೌಕ್ ನಲ್ಲಿ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದರು.