ನವದೆಹಲಿ : ರಾಜ್ಯಸಭಾ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನಲೆ ಆಮ್ ಆದ್ಮಿ ಪಕ್ಷದ ಸದಸ್ಯ ಸಂಜಯ್ ಸಿಂಗ್ ಅವರನ್ನು ಕಲಾಪದಿಂದ ಅಮಾನತುಗೊಳಿಸಲಾಗಿದೆ.
12 ಗಂಟೆಗೆ ಪ್ರಶ್ನೋತ್ತರ ವೇಳೆಗಾಗಿ ಸದನ ಕಲಾಪ ಪುನಾರಂಭವಾದಾಗ ಸಂಜಯ್ ಸಿಂಗ್ ಅವರು ಸಭಾಧ್ಯಕ್ಷರ ಮೇಜಿಗೆ ಕಾಗದ ಎಸೆದು ಘೋಷಣೆ ಕೂಗಿ ಕಲಾಪಕ್ಕೆ ಅಡ್ಡಿಪಡಿಸಿದರು. ಈ ಹಿನ್ನೆಲೆಯಲ್ಲಿ ರಾಜ್ಯಸಭೆಯ ಉಪ ಸಭಾಪತಿ ಹರಿವಂಶ ಸಿಂಗ್ ಸಂಜಯ್ ಸಿಂಗ್ ಅವರನ್ನು ಈ ವಾರದ ಕಲಾಪದ ಉಳಿದಿರುವ ಅವಧಿಗೆ ಅಮಾನತುಗೊಳಿಸಿದ್ದಾರೆ.
ನಿನ್ನೆ ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ ಕಾರಣಕ್ಕೆ ವಿರೋಧ ಪಕ್ಷಗಳ ಒಟ್ಟು 19 ಸಂಸದರನ್ನು ರಾಜ್ಯಸಭೆಯಿಂದ ಒಂದು ವಾರದ ಅವಧಿಗೆ ಅಮಾನತುಗೊಳಿಸಲಾಗಿತ್ತು.










