ಕಟೀಲ್ ಕಾರಿಗೆ ಮುತ್ತಿಗೆ ಹಾಕಿ ಕಾರ್ಯಕರ್ತರ ಆಕ್ರೋಶ – ಪೊಲೀಸರಿಂದ ಲಾಠಿ ಪ್ರಹಾರ…

70
firstsuddi

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯನ್ನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂಪರ ಸಂಘಟನೆಗಳು ವ್ಯಾಪಕ ಆಕ್ರೋಶ ಹೊರಹಾಕುತ್ತಿವೆ. ಕೊಲೆಗಾರರಿಗೆ ಕಠಿಣ ಶಿಕ್ಷೆಯಾಗಬೇಕು ಎಂಬ ಆಗ್ರಹ ದಟ್ಟವಾಗಿದೆ.

ಪ್ರವೀಣ್ ಮೃತದೇಹದ ಅಂತಿಮ ದರ್ಶನ ಪಡೆಯಲು ಬೆಳ್ಳಾರೆಗೆ ಆಗಮಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಬಿಜೆಪಿ ಅಧ್ಯಕ್ಷರನ್ನು ಮುತ್ತಿಗೆ ಹಾಕಿದ ಕಾರ್ಯಕರ್ತರು, ರಾಜ್ಯದಲ್ಲಿ ಬಿಜೆಪಿ ಸರ್ಕಾವಿದ್ದರೂ ಅಪರಾಧಿಗಳ ಬಂಧನ ಆಗುತ್ತಿಲ್ಲ. ಇನ್ನೆಷ್ಟು ಕಾರ್ಯಕರ್ತರ ಹತ್ಯೆ ಆಗಬೇಕು? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ನಳಿನ್ ಕುಮಾರ್ ಅವರ ಕಾರನ್ನು ಕಾರ್ಯಕರ್ತರು ಮೇಲಕ್ಕೆ ಎತ್ತಲು ಪ್ರಯತ್ನಿಸಿದ್ದಾರೆ. ಪ್ರತಿಭಟನೆ ಜೋರಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಲಾಠಿ ಪ್ರಹಾರ ಮಾಡಿ ಗುಂಪು ಚದುರಿಸಿದರು. ಈ ವೇಳೆ ಓರ್ವ ಕಾರ್ಯಕರ್ತನಿಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.