ದಕ್ಷಿಣ ಕನ್ನಡದಲ್ಲಿ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿ ಮುಂಗಟ್ಟು ಬಂದ್ ಮಾಡಲು ಡಿಸಿ ಆದೇಶ…

56
firstsuddi

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಬಂದ್ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಜನತೆ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಇಲಾಖೆಯೊಂದಿಗೆ ಸಹಕರಿಸಬೇಕು. ಈ ಆದೇಶ ಆಗಸ್ಟ್ 1 ರ ವರೆಗೆ ಜಾರಿಯಲ್ಲಿರಲಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಅಂಗಡಿಗಳ ಮೇಲೆ ನಿಗಾ ಇರಿಸಬೇಕು. ಆಸ್ಪತ್ರೆ ಮೆಡಿಕಲ್ ಸೇರಿದಂತೆ ತುರ್ತು ಸೇವೆಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ದ.ಕ ಜಿಲ್ಲೆಯಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸಭೆ ನಡೆಸಲಾಗುತ್ತದೆ. ಪೊಲೀಸ್ ಹಿರಿಯ ಅಧಿಕಾರಿಗಳು, ವಿವಿಧ ಧರ್ಮದ ಮುಖಂಡರು ಹಾಗೂ ರಾಜಕೀಯ ಪಕ್ಷದ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಹೇಳಿದರು.