ಕಾಮನ್​ವೆಲ್ತ್​ ಗೇಮ್ಸ್​​ನಲ್ಲಿ ಭಾರತಕ್ಕೆ ಮೊದಲ ಪದಕ – ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ಸಂಕೇತ್ ಸರ್ಗರ್.

96
firstsuddi

ಬರ್ಮಿಂಗ್ಹ್ಯಾಮ್ : ಕಾಮನ್​ವೆಲ್ತ್​ ಗೇಮ್ಸ್​​ನಲ್ಲಿ ಭಾರತ ಪದಕದ ಖಾತೆ ತೆರೆದಿದೆ. ಸಂಕೇತ್ ಮಹಾದೇವ್ ಸರ್ಗರ್ (21) ಪುರುಷರ ವಿಭಾಗದ 55 ಕೆಜಿ ವೇಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 248 ಕೆಜಿ (113+135) ಭಾರ ಎತ್ತುವ ಮೂಲಕ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ.

ಮಲೇಷ್ಯಾದ ಅಥ್ಲೀಟ್ಸ್ ಒಟ್ಟು 249 ಕೆಜಿ ಎತ್ತುವ ಮೂಲಕ ಚಿನ್ನದ ಪದಕ ಗೆದ್ದರೆ, ಶ್ರೀಲಂಕಾದ ಅಥ್ಲೀಟ್ಸ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.