ಕರ್ತವ್ಯದ ಅವಧಿಯಲ್ಲಿ ಜನಪರವಾಗಿ ಸೇವೆ ಸಲ್ಲಿಸಿದವರು ಜನಮಾನಸದಲ್ಲಿ ಶಾಶ್ವತವಾಗಿ ಉಳಿಯುತ್ತಾರೆ : ಜಯರಾಂ.

93
firstsuddi

ಚಿಕ್ಕಮಗಳೂರು : ನಗರದ ಬೇಲೂರು ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಸೇವೆಯಿಂದ ನಿವೃತ್ತರಾದ ಹಿರಿಯ ಉಪನ್ಯಾಸಕಿ ಎಸ್.ಮಂಜುಳಾ ಅವರಿಗೆ ಕಾಲೇಜಿನ ಅಭಿವೃದ್ದಿ ಸಮಿತಿ ಸದಸ್ಯರು ಮತ್ತು ಸಹೋದ್ಯೋಗಿಗಳು ಆತ್ಮೀಯ ಬೀಳ್ಕೊಡುಗೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯ ಜಯರಾಂ ಕರ್ತವ್ಯದ ಅವಧಿಯಲ್ಲಿ ಜನಪರವಾಗಿ ಸೇವೆ ಸಲ್ಲಿಸಿದವರು ಜನಮಾನಸದಲ್ಲಿ ಶಾಶ್ವತವಾಗಿ ಉಳಿಯುತ್ತಾರೆ ಎಂದರು.

ಸಮಾರಂಭದಲ್ಲಿ ಮಾತನಾಡಿದ ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರು ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳು ಉಪನ್ಯಾಸಕಿ ಮಂಜುಳಾ ಅವರ ನಡೆ, ನುಡಿ, ಕಾರ್ಯಕ್ಷಮತೆ, ವಿದ್ಯಾರ್ಥಿಗಳ ಮೇಲಿನ ಕಾಳಜಿಯನ್ನು ಪ್ರಶಂಸಿಸಿದರು.

ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರು ಭೋದಕ ಮತ್ತು ಭೋದಕೇತರ ಸಿಬ್ಬಂಧಿಗಳು ಹಾಗೂ ವಿದ್ಯಾರ್ಥಿಗಳು ಮಂಜುಳಾ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.

ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕಾಗಿ ಉಪನ್ಯಾಸಕಿ ಎಸ್.ಮಂಜುಳಾ ಅವರು ಕಾಲೇಜಿನ ಪ್ರಾಂಶುಪಾಲ ಜಿ.ಬಿ.ವಿರೂಪಾಕ್ಷ ಅವರಿಗೆ ಒಂದು ಲಕ್ಷ ರೂ ದೇಣಿಗೆ ನೀಡಿದರು.

ಈ ವೇಳೆ ಮಾತನಾಡಿದ ಮಂಜುಳಾ ತಮ್ಮ 37 ವರ್ಷಗಳ ಸೇವೆ ತಮಗೆ ಅತ್ಯಂತ ತೃಪ್ತಿ ಮತ್ತು ಹೆಮ್ಮೆ ತಂದಿದೆ ಎಂದರು,ಸೇವಾವಧಿಯಲ್ಲಿ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.

ಕಾಲೇಜಿನ ಪ್ರಾಚಾರ್ಯ ಜಿ.ಬಿ.ವಿರೂಪಾಕ್ಷ ಅಧ್ಯಕ್ಷತೆ ವಹಿಸಿದ್ದರು, ಪ್ರೌಢಶಾಲೆ ಉಪಪ್ರಾಂಶುಪಾಲ ನಾಗರಾಜ್, ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಧನಂಜಯ, ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ಅರುಂದತಿ, ಲಲಿತ್‍ಕುಮಾರ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ, ಉಪನ್ಯಾಸಕರಾದ ರುದ್ರಪ್ಪಶಾಸ್ತ್ರಿ, ಕವಿತಾ ಉಪಸ್ಥಿತರಿದ್ದರು.